ಶಾಸಕ ಪ್ರದೀಪ್ ಈಶ್ವರ್ ಕುಟುಂಬದಲ್ಲಿ ಸಂಭ್ರಮ: ಹೆಣ್ಣು ಮಗುವಿನ ತಂದೆಯಾದ ಶಾಸಕ!
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಕುಟುಂಬದಲ್ಲಿ ಇದೀಗ ಸಂತಸದ ವಾತಾವರಣ ಮನೆಮಾಡಿದೆ. ಶಾಸಕ ಪ್ರದೀಪ್ ಈಶ್ವರ್ ಹಾಗೂ ಅವರ ಪತ್ನಿ ನಯನ ದಂಪತಿಗೆ ಮುದ್ದಾದ ಹೆಣ್ಣು ಮಗು ಜನಿಸಿದ್ದು, ಕುಟುಂಬಕ್ಕೆ ಮಹಾಲಕ್ಷ್ಮಿಯ ಆಗಮನವಾಗಿದೆ.
ತಂದೆಯಾದ ಸಂತಸದ ಸುದ್ದಿಯನ್ನು ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ನವಜಾತ ಹೆಣ್ಣು ಮಗುವನ್ನು ಕೈಯಲ್ಲಿ ಎತ್ತಿಕೊಂಡು ಮುದ್ದಾಡುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿರುವ ಅವರು, ತಮ್ಮ ಜೀವನದ ಅತ್ಯಂತ ವಿಶೇಷ ಕ್ಷಣವನ್ನು ಸಂಭ್ರಮಿಸಿದ್ದಾರೆ.
ಇದೇ ವೇಳೆ, ತಾಯಿ ನಯನ ಹಾಗೂ ನವಜಾತ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ರಾಜಕೀಯ ಮುಖಂಡರು ಹಾಗೂ ಹಿತೈಷಿಗಳು ಸಾಮಾಜಿಕ ಜಾಲತಾಣಗಳ ಮೂಲಕ ದಂಪತಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.
ಒಟ್ಟಿನಲ್ಲಿ, ಶಾಸಕ ಪ್ರದೀಪ್ ಈಶ್ವರ್ ಅವರ ಮನೆಗೆ ಮಹಾಲಕ್ಷ್ಮಿಯ ಆಗಮನವಾಗಿರುವುದು ಕುಟುಂಬದ ಸಂತಸವನ್ನು ಇಮ್ಮಡಿಗೊಳಿಸಿದ್ದು, ದಂಪತಿಯ ಹೊಸ ಜೀವನದ ಪಯಣಕ್ಕೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ವ್ಯಕ್ತವಾಗುತ್ತಿವೆ.









